Webdunia - Bharat's app for daily news and videos

Install App

ನಡಾಲ್ ಆಸ್ಟ್ರೇಲಿಯನ್ ಓಪನ್ ಗೆಲ್ಲಬಲ್ಲರು: ಆಗಾಸ್ಸಿ

Webdunia
ಸೋಮವಾರ, 10 ಜನವರಿ 2011 (16:24 IST)
ಜ್ವರದಿಂದ ಬಳಲುತ್ತಿರುವ ಹೊರತಾಗಿಯೂ ಮುಂಬರುವ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಗ್ರಾಂಡ್‌ಸ್ಲಾಮ್ ಟೂರ್ನಿಯನ್ನು ವಿಶ್ವ ನಂ.1 ಆಟಗಾರ ರಾಫೆಲ್ ನಡಾಲ್ ಗೆಲ್ಲಬಲ್ಲರು ಎಂದು ಅಮೆರಿಕಾದ ಮಾಜಿ ದಂತಕಥೆ ಆಂಡ್ರೆ ಆಗಾಸ್ಸಿ ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಡಾಲ್ ಫಿಟ್‌ನೆಸ್ ಬಗ್ಗೆ ಅನುಮಾನ ಮೂಡಿವೆ. ಆಸ್ಟ್ರೇಲಿಯಾದಲ್ಲಿನ ಉಷ್ಣಾಂಶ ಪರಿಸ್ಥಿತಿಯನ್ನು ನಡಾಲ್ ನಿಭಾಯಿಸಬಲ್ಲರೇ ಎಂಬುದು ಪ್ರಮುಖ ವಿಷಯವಾಗಿದೆ. ಆದರೆ 2010ರ ಋತುವಿನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ನಡಾಲ್ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿರುವ ಮಾಜಿ ವಿಶ್ವ ನಂ.1 ಆಟಗಾರ ಆಗಾಸ್ಸಿ, ಇಲ್ಲಿಯೂ ಸ್ಪಾನಿಶ್ ಆಟಗಾರ ಫೆವರೀಟ್ ಎನಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ರೋಜರ್ ಫೆಡರರ್ ಕೂಡಾ ವರ್ಷಾಂತ್ಯದಲ್ಲಿ ಶ್ರೇಷ್ಠ ಟೆನಿಸ್ ಆಡಿದ್ದಾರೆ. ಹೀಗಾಗಿ ಇವರಿಬ್ಬರ ನಡುವೆ ಉತ್ತಮ ಪೈಪೋಟಿ ಮೂಡಿ ಬರಲಿದೆ. ಆದರೆ ನಡಾಲ್ ಅವರಿಗೆ ಅವಕಾಶ ಹೆಚ್ಚಿದೆ ಎಂದರು.

2010 ರಲ್ಲಿ ಫ್ರೆಂಚ್ ಓಪನ್, ವಿಂಬಲ್ಡನ್ ಮತ್ತು ಯುಎಸ್ ಓಪನ್‌ಗಳನ್ನು ಬಗಲೇರಿಸಿದ್ದ ನಡಾಲ್, ಟೀಕಾಕಾರರ ಬಾಯಿ ಮುಚ್ಚಿಸಿದ್ದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments