ಜೀರ್ಣಕ್ರಿಯೆ ವ್ಯವಸ್ಥೆ ಆರೋಗ್ಯವಾಗಿರಲು ತುಳಸಿ ಎಲೆ ಸೇವಿಸಿ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ತುಳಸಿ ಎಲೆಗಳನ್ನು ಸೇವಿಸಿದರೆ ಜೀರ್ಣಕ್ರಿಯೆ ವ್ಯವಸ್ಥೆಯು ಆರೋಗ್ಯ ವಾಗಿರುವುದು, ಜೊತೆಗೆ ಬಾಯಿಯ ದುರ್ವಾಸನೆ ಮತ್ತು ಇತರ ಸಮಸ್ಯೆಗಳನ್ನು ನಿವಾರಣೆ ಆಗುವುದು
photo credit social media
ಭಾರತದಲ್ಲಿ ಅದರಲ್ಲೂ ಹಿಂದೂಗಳು ತುಳಸಿಯನ್ನು ತುಂಬಾ ಪವಿತ್ರವೆಂದು ಭಾವಿಸುವರು. ತುಳಸಿ ಗಿಡದಲ್ಲಿ ದೇವದೇವತೆಗಳು ನೆಲೆಸಿರುವರು ಎಂದು ಪುರಾಣಗಳು ಕೂಡ ಹೇಳಿವೆ. ಅದೇ ರೀತಿಯಲ್ಲಿ ತುಳಸಿ ಗಿಡವನ್ನು ಪುರಾತನ ಕಾಲದಿಂದಲೂ ಆಯುರ್ವೇದ ದಲ್ಲಿ ಔಷಧಿಯಾಗಿಯೂ ಬಳಸಿಕೊಂಡು ಬರಲಾಗುತ್ತಾ ಇದೆ. ತುಳಸಿ ಎಲೆಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಇದೆ ಎಂದು ಹೇಳಲಾಗುತ್ತದೆ.
ಕೆಲವೊಂದು ಅಧ್ಯಯನಗಳು ಕೂಡ ಇದನ್ನು ಸಾಬೀತು ಮಾಡಿವೆ. ತುಳಸಿ ಗಿಡವನ್ನು ಹೆಚ್ಚಾಗಿ ಭಾರತದಲ್ಲಿ ಮಾತ್ರ ಬೆಳೆಯಲಾಗುತ್ತದೆ. ಧಾರ್ಮಿಕ ಹಾಗೂ ಔಷಧಿ ಯಾಗಿಯೂ ಇದನ್ನು ಬಳಕೆ ಮಾಡಲಾಗುತ್ತದೆ.
ತುಳಸಿ ಗಿಡವನ್ನು ಚಾ, ತಾಜಾ ಎಲೆಗಳು, ಜ್ಯೂಸ್ ಮತ್ತು ಒಣಗಿಸಿ ಹುಡಿ ಮಾಡಿದ ರೂಪದಲ್ಲಿ ಬಳಸಲಾಗುತ್ತದೆ. ಈ ಲೇಖನದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನು ತಿನ್ನುವುದರಿಂದ ಹಾಗೂ ತುಳಸಿ ನೀರು ಕುಡಿದರೆ ಸಿಗುವ ಲಾಭಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.
ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ ಸಿಗುವ ಲಾಭಗಳ ಬಗ್ಗೆ ನಿಮಗೆ ತಿಳಿದಿದೆಯೋ ಇಲ್ಲವೋ, ಆದರೆ ಇದರಿಂದ ದೇಹದೊಳಗಿನ ಹಾಗೂ ಹೊರಗಿನ ಆರೋಗ್ಯಕ್ಕೆ ಹಲವಾರು ಲಾಭಗಳೂ ಇವೆ. ತುಳಸಿ ಎಲೆಗಳಲ್ಲಿ ಚಿಕಿತ್ಸಕ ಗುಣಗಳು ಇದೆ ಎಂದು ಹಿಂದಿನಿಂದಲೂ ಪರಿಗಣಿಸಲಾಗಿದೆ.
ತುಳಸಿ ಎಲೆಗಳನ್ನು ಸೇವಿಸುವ ಅಥವಾ ಅದರ ನೀರು ಕುಡಿಯುವ ಪ್ರಮೂಕ ಲಾಭವೆಂದರೆ ಇದು ಪ್ರತಿರೋಧಕ ವ್ಯವಸ್ಥೆ ಬಲಪಡಿಸುವುದು. ತುಳಸಿ ಎಲೆಗಳನ್ನು ಆ್ಯಂಟಿ ಆಕ್ಸಿಡೆಂಟ್ ಸಮೃದ್ಧವಾಗಿದೆ ಮತ್ತು ಇದು ಸೋಂಕಿನ ವಿರುದ್ಧ ಹೋರಾಡುವುದು.
ತುಳಸಿ ಎಲೆಗಳಲ್ಲಿ ಇರುವಂತಹ ಅಡಾಪ್ಟೋಜೆನ್ ಎನ್ನುವ ಅಂಶವು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸಿದರೆ ಅದರಿಂದ ನರ ವ್ಯವಸ್ಥೆಗೆ ಆರಾಮವಾಗಲು ನೆರವಾಗುವುದು ಮತ್ತು ರಕ್ತ ಸಂಚಾರವು ಸುಧಾರಣೆ ಆಗುವುದು. ಪ್ರತೀ ಎರಡು ದಿನಕ್ಕೊಮ್ಮೆ ಐದು ತುಳಸಿ ಎಲೆಗಳನ್ನು ಸೇವಿಸಿ.
ತುಳಸಿ ಎಲೆಗಳನ್ನು ಬಾಯಿಯ ದುರ್ವಾಸನೆ ಮತ್ತು ಇತರ ಸಮಸ್ಯೆಗಳನ್ನು ನಿವಾರಣೆ ಮಾಡುವುದು. ತುಳಸಿ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ ಮತ್ತು ಇದು ಬಾಯಿಯ ದುರ್ವಾಸನೆಯನ್ನು ತುಂಬಾ ಪರಿಣಾಮಕಾರಿ ಆಗಿ ನಿವಾರಣೆ ಮಾಡುವುದು.