ಟೀಂ ಇಂಡಿಯಾ ಕ್ರಿಕೆಟಿಗ ಅಕ್ಸರ್ ಪಟೇಲ್ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೇಹಾ ಪಟೇಲ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಗುಜರಾತ್ ನ ವಡೋದರದಲ್ಲಿ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಅಕ್ಸರ್, ಮೇಹಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಹಾರ ತಜ್ಞೆಯಾಗಿರುವ ಮೆಹಾ ಪಟೇಲ್ ಜೊತೆಗೆ ಅಕ್ಸರ್ ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇಬ್ಬರ ಮದುವೆ ಫೋಟೋಗಳು ವೈರಲ್ ಆಗಿವೆ.