ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 2 ರನ್ ಗಳಿಂದ ಗೆದ್ದುಕೊಂಡಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಯುವ ಆಟಗಾರರಾದ ಶಿವಂ ಮಾವಿ, ಅಕ್ಸರ್ ಪಟೇಲ್, ದೀಪಕ್ ಹೂಡಾ.
ಅಕ್ಸರ್ ಪಟೇಲ್ ಮತ್ತು ದೀಪಕ್ ಹೂಡಾ ಆಲ್ ರೌಂಡರ್ ಪ್ರದರ್ಶನ ನೀಡಿದರೆ ಚೊಚ್ಚಲ ಪಂದ್ಯವಾಡಿದ ಶಿವಂ ಮಾವಿ ಬೌಲಿಂಗ್ ನಲ್ಲಿ 4 ವಿಕೆಟ್ ಕಬಳಿಸಿದರು.